ಮೈಸೂರು

ಮಕ್ಕಳ ದಿನಾಚರಣೆ ಅಂಗವಾಗಿ ಚಿತ್ರ ಕಲಾ ಸ್ಪರ್ಧೆ : ಚಿತ್ರಕ್ಕೆ ಬಣ್ಣ ತುಂಬುವ ಮೂಲಕ ಯದುವೀರ್ ಚಾಲನೆ

ಮೈಸೂರು,ನ.19:- ಅರಮನೆ ಅವರಣದಲ್ಲಿ ಭೇರುಂಡ ಸಂಸ್ಥೆ ಯಿಂದ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಯನ್ನು ನಿನ್ನೆ ಆಯೋಜಿಸಲಾಗಿತ್ತು.

ಮಕ್ಕಳ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಿತ್ರಕ್ಕೆ ಬಣ್ಣ ತುಂಬುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು ನಮ್ಮ ಇತಿಹಾಸ ವನ್ನು ಮುಂದಿನ ಪೀಳಿಗೆಗೆ ತಲುಪಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮ ಭೇರುಂಡ ಸಂಸ್ಥೆಯಿಂದ ವಿವಿಧ ಚಟುವಟಿಕೆಗಳನ್ನು ಮಕ್ಕಳಿಗಾಗಿ ಮಾಡಲಾಗುತ್ತಿದೆ ಎಂದರು.

ಕೆ ಆರ್ ಎಸ್ ನಲ್ಲಿ ಡಿಸ್ನಿ ಲ್ಯಾಂಡ್ ನಿರ್ಮಾಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು  ಅವಶ್ಯಕತೆ ಇದೆಯಾ ಎಂದು ಸರ್ಕಾರವನ್ನು ಕೇಳಬೇಕು. ಈ ವಿಚಾರದ ಬಗ್ಗೆ ನನ್ನ ಅಭಿಪ್ರಾಯ ಇಲ್ಲ. ಈ ಡಿಸ್ನಿಲ್ಯಾಂಡ್ ನಿರ್ಮಾಣ ದ ಬಗ್ಗೆ ಮಾಹಿತಿ ಇಲ್ಲ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: