
ಕರ್ನಾಟಕಪ್ರಮುಖ ಸುದ್ದಿ
ಅರಬ್ಬಿ ಸಮುದ್ರದ ಕಡೆ ಸಾಗಿದ ಗಜ, ಜನತೆಗೆ ಎಚ್ಚರಿಕೆ ಸಂದೇಶ ರವಾನೆ
ಬೆಂಗಳೂರು (ನ.19): ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿ ತಮಿಳುನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಸಾವು-ನೋವು ತಂದ ‘ಗಜ’ ಚಂಡಮಾರುತ ಅರಬ್ಬಿ ಸಮುದ್ರದ ಆಗ್ನೇಯ ಭಾಗದ ಕಡೆ ಚಲಿಸಿದೆ. ಅಲ್ಲಿ ಒತ್ತಡದ ವಾತಾವರಣ ನಿರ್ಮಾಣವಾಗಿದ್ದು, ಆ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಇಷ್ಟೇ ಅಲ್ಲದೆ ರಾಜ್ಯದ ಉತ್ತರ ಒಳನಾಡು ಸೇರಿದಂತೆ ಪಶ್ಚಿಮ ಭಾಗದಲ್ಲಿ ಗಾಳಿ ಮಳೆಯಾಗಲಿದೆ. ಚಂಡಮಾರುತದಿಂದಾಗಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಯಚೂರು, ಯಾದಗಿರಿ, ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಜನ ಎಚ್ಚರ ವಹಿಸಬೇಕೆಂದು ಸೂಚಿಸಲಾಗಿದೆ. (ಎನ್.ಬಿ)