ಕರ್ನಾಟಕಪ್ರಮುಖ ಸುದ್ದಿ

ಶಬರಿಮಲೆಯಲ್ಲಿ ಮಹಿಳೆಯರಿಗೆ ನಿರ್ಬಂಧ ಸರಿಯಲ್ಲ: ಸಿರಿಗೆರೆ ಶ್ರೀ

ಬೆಂಗಳೂರು (ನ.19): ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶ ನೀಡುವಂತೆ ಇದೀಗ ಈ ವಿವಾದದ ಕುರಿತು ಮಾತನಾಡಿರುವ ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು, ಶಬರಿಮಲೆಯ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ಮಹಿಳೆಯರು ಪ್ರವೇಶಿಸದಂತೆ ತಡೆಯುತ್ತಿರುವುದು ಸರಿಯಲ್ಲವೆಂದು ಹೇಳಿದ್ದಾರೆ.

ಅಲ್ಲದೆ ಸಂಪ್ರದಾಯಗಳನ್ನು ನಾವುಗಳು ವೈಚಾರಿಕ ನೆಲೆಗಟ್ಟಿನಲ್ಲಿ ನೋಡಬೇಕಿದೆ ಎಂದೂ ಸಹ ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ವಿರುದ್ಧ  ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ತೀರ್ಪು ಮರು ಪರಿಶೀಲಿಸುವಂತೆ ಅರ್ಜಿಯನ್ನೂ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ಈಗ ನೀಡಿರುವ ತೀರ್ಪನ್ನು ವಚನಕಾರರು 12ನೇ ಶತಮಾನದಲ್ಲೇ ನೀಡಿದ್ದರು ಎಂದು ಹೇಳಿರುವ ಶ್ರೀಗಳು, ಇಂತಹ ಆಧುನಿಕ ಯುಗದಲ್ಲೂ ಲಿಂಗ ತಾರತಮ್ಯ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ. (ಎನ್.ಬಿ)

Leave a Reply

comments

Related Articles

error: