ಸುದ್ದಿ ಸಂಕ್ಷಿಪ್ತ
ಪ್ರವಾಸಿ ಟ್ಯಾಕ್ಸಿ ಅರ್ಜಿ ಆಹ್ವಾನ
ಮೈಸೂರು,ನ.19-ಪ್ರವಾಸೋದ್ಯಮ ಇಲಾಖಾ ವತಿಯಿಂದ ಮೈಸೂರು ಜಿಲ್ಲೆಯ ಅರ್ಹ ಹಿಂದುಳಿದ ಅಥವಾ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ 41 ಅಭ್ಯರ್ಥಿಗಳಿಗೆ 3 ಲಕ್ಷ ರೂ.ಗಳ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಒದಗಿಸಲು ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು 20 ರಿಂದ 40 ವರ್ಷದೊಳಗಿರಬೇಕು. ಅರ್ಜಿದಾರರು ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಲಘು ವಾಹನ ಚಾಲನಾ (ಎಲ್.ಎಂ.ವಿ) ಪರವಾನಗಿ ಪಡೆದು ಕನಿಷ್ಠ ಒಂದು ವರ್ಷವಾಗಿರಬೇಕು. ಬ್ಯಾಡ್ಜ್ ಹೊಂದಿರುವುದು ಕಡ್ಡಾಯ. ಅರ್ಜಿದಾರರು ಹಾಗೂ ಅವರ ಕುಟುಂಬದವರು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ನೌಕರಿಯಲ್ಲಿರಬಾರದು ಹಾಗೂ ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, # 2, ಹೋಟೆಲ್ ಮಯೂರ ಹೊಯ್ಸಳ, ಜೆ.ಎಲ್.ಬಿ. ರಸ್ತೆ, ಮೈಸೂರು ಇಲ್ಲಿಗೆ ಡಿಸೆಂಬರ್ 18 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-2422096 ಅನ್ನು ಸಂಪರ್ಕಿಸಿ ಪಡೆಯಬಹುದಾಗಿದೆ. (ಎಂ.ಎನ್)