ಸುದ್ದಿ ಸಂಕ್ಷಿಪ್ತ

ನ.20 ರಂದು ವಿದ್ಯುತ್ ವ್ಯತ್ಯಯ

ಮೈಸೂರು,ನ.19-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆವಿ ಸೌತ್ (ದಕ್ಷಿಣ) ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೊಮ್ಮುವ 11 ಕೆ.ವಿ. ಕೆ.ಎಂ.ಪಿ. ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಹೀಗಾಗಿ ನ.20 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಅಶೋಕಪುರಂ 1 ರಿಂದ 13ನೇ ಕ್ರಾಸ್, ಕೃಷ್ಣಮೂರ್ತಿಪುರಂ, ಬಲ್ಲಾಳ್ ಸರ್ಕಲ್ ಹಾಗೂ  ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. (ಎಂ.ಎನ್)

Leave a Reply

comments

Related Articles

error: