ಮೈಸೂರು

ಸಚಿವರ ಪಾರ್ಥೀ ಶರೀರದ ದರ್ಶನಕ್ಕೆ ಸಿಎಂ ಆಗಮನ

ರಾಜ್ಯದ ಸಹಕಾರ ಹಾಗೂ ಸಕ್ಕರೆ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಅವರು ಮಂಗಳವಾರ ಮುಂಜಾನೆ ಚಿಕ್ಕಮಗಳೂರಿನ ಸೆರಾಯ್ ರೆಸಾರ್ಟ್’ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು, ಸಚಿವರ ಪಾರ್ಥೀವ ಶರೀರದ ದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ.

ಮಂಗಳವಾರ ಮುಂಜಾನೆ ನಿಧನರಾದ ಸಚಿವರ ಮೈಸೂರಿನ ಕುವೆಂಪುನಗರದಲ್ಲಿರುವ ಮನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದರು. ಸಚಿವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಆಗಮಿಸಿದ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಅವರದು ಸಾಯುವ ವಯಸ್ಸಲ್ಲ. ಅವರ ಸಾವಿನಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ. ತಾಯಿ ಚಾಮುಂಡೇಶ್ವರಿ ಅವರ ಪತ್ನಿ ಮತ್ತು ಮಕ್ಕಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

ಸಚಿವ ಜಾರ್ಜ್ ಸೇರಿದಂತೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳ ಜೊತೆಗಿದ್ದರು.

Leave a Reply

comments

Related Articles

error: