
ಪ್ರಮುಖ ಸುದ್ದಿ
ಜಮೀನಿನಲ್ಲಿ ನವಜಾತ ಹೆಣ್ಣು ಮಗು ಪತ್ತೆ
ರಾಜ್ಯ(ತುಮಕೂರು)ನ.20:- ಜಮೀನಿನಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶು ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊನ್ನಹಳ್ಳಿ ಗ್ರಾಮದ ಜಮೀನಿನಲ್ಲಿ ನವಜಾತ ಹೆಣ್ಣು ಮಗು ಪತ್ತೆಯಾಗಿದೆ. ಗ್ರಾಮಸ್ಥರು ಬೆಳಿಗ್ಗೆ ಜಮೀನಿಗೆ ತೆರಳುತ್ತಿದ್ದ ವೇಳೆ ಮಗು ಅಳುತ್ತಿದ್ದ ಕೂಗಿ ಕೇಳಿದ್ದು ತಕ್ಷಣ ಅಲ್ಲಿಗೆ ಧಾವಿಸಿದಾಗ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಗ್ರಾಮದ ಮಹಾದೇವಮ್ಮ ಎಂಬವರು ಮಗುವನ್ನು ರಕ್ಷಿಸಿದ್ದಾರೆ.
ಈ ಮಗು ಇಂದು ಬೆಳಿಗ್ಗೆ ಜನಿಸಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿದೆ. ಹೀಗಾಗಿ ತುಮಕೂರು ಜಿಲ್ಲೆಯ ಆಸ್ಪತ್ರೆಯಲ್ಲಿ ವಿಶೇಷ ನಿಯೋನೇಟಲ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಹೊಕ್ಕುಳ ಬಳ್ಳಿಯಲ್ಲಿ ದಾರ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಕುರಿತು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯು ಮಗುವನ್ನು ತನ್ನ ವಶಕ್ಕೆ ಪಡೆದಿದೆ. (ಕೆ.ಎಸ್,ಎಸ್.ಎಚ್)