
ಮೈಸೂರು
ಸಚಿವ ಜಿ.ಟಿ.ದೇವೇಗೌಡ ಹುಟ್ಟು ಹಬ್ಬ : ರಕ್ತದಾನ ಶಿಬಿರ
ಮೈಸೂರು,ನ.20 : ಜಿ.ಟಿ.ದೇವೇಗೌಡರ ಅಭಿಮಾನಿಗಳ ಬಳಗದಿಂದ ಸಚಿವ ಜಿ.ಟಿ.ಡಿ ಅವರ 69ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ. ರಕ್ತದಾನಿಗಳ ಸನ್ಮಾನ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರವನ್ನ ಶಾರದ ವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ನ.25ರಂದು ಮಧ್ಯಾಹ್ನ 3 ಗಂಟೆಗೆ ಏರ್ಪಡಿಸಲಾಗಿದೆ.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತರ ಅಂಶಿ ಪ್ರಸನ್ನಕುಮಾರ್, ಶಾರದ ವಿಲಾಸ ಸಂಸ್ಥೆ ಅಧ್ಯಕ್ಷ ಬಿ.ಎಸ್.ಪಾರ್ಥಸಾರಥಿ, ಎಂಡಿಸಿಸಿಸಿ ಬ್ಯಾಂಕ್ ನಿರ್ದೇಶಕ ಜಿ.ಡಿ.ಹರೀಶ್ ಗೌಡ ಮೊದಲಾದವರು ಭಾಗವಹಿಸಲಿದ್ದಾರೆ.
ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲಿಚ್ಚಿಸುವವರು ಭಾಗವಹಿಸಬಹುದೆಂದು ಸಂಘದ ಅಧ್ಯಕ್ಷ ದೂರು ಮಂಜುನಾಥ್ ಪತ್ರಿಕಾ ಹೇಳಿಕೆ ನೀಡಿದ್ದಾರೆ. (ಕೆ.ಎಂ.ಆರ್)