ಕರ್ನಾಟಕಪ್ರಮುಖ ಸುದ್ದಿಮೈಸೂರು

ಸಚಿವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯಾತಿಗಣ್ಯರು

mh-2ಚಿಕ್ಕಮಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಸಚಿವ ಮಹದೇವಪ್ರಸಾದ್ ಅವರ ಪಾರ್ಥಿವ ಶರೀರವನ್ನು ಕುವೆಂಪುನಗರದಲ್ಲಿರುವ ಅವರ ದೇವಗೀತಾ ನಿವಾಸಕ್ಕೆ ತರಲಾಗಿತ್ತು. ಈ ಸಂದರ್ಭ ಗಣ್ಯಾತಿಗಣ್ಯರು ತೆರಳಿ ಅಂತಿಮ ದರ್ಶನ ಪಡೆದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಚಿವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಅವರ ಪತ್ನಿ ಹಾಗೂ ಮಕ್ಕಳಿಗೆ ಸಾಂತ್ವನ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಚಿವರುಗಳಾದ ಡಾ.ಮಹದೇವಪ್ಪ, ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್, ಎ.ಮಂಜು, ಸೋಮಶೇಖರ್, ವಾಸು, ಹುಣಸೂರು ಹಾಗೂ ಪಿರಿಯಾಪಟ್ಟಣ ಶಾಸಕರುಗಳು ಅಂತಿಮ ನಮನ ಸಲ್ಲಿಸಿದರು.

ಮಹದೇವ ಪ್ರಸಾದ್ ಅವರ ಅಪಾರ ಅಭಿಮಾನಿಗಳು, ಬೆಂಬಲಿಗರು ತೆರಳಿ ಅಂತಿಮ ನಮನ ಸಲ್ಲಿಸಿದರು. ಮನೆಯವರ  ಆಕ್ರಂದನ ಮುಗಿಲುಮುಟ್ಟಿತ್ತು. ಮುಖ್ಯಮಂತ್ರಿಗಳ ಕಣ್ಣಂಚಿನಲ್ಲೂ ಕಂಬನಿ ಜಾರಿತ್ತು.

ಸಂಜೆ 7.30ರ ಸುಮಾರಿಗೆ ಪಾರ್ಥಿವ ಶರೀರವನ್ನು ಗುಂಡ್ಲುಪೇಟೆಗೆ ಕೊಂಡೊಯ್ಯಲಾಗುತ್ತಿದ್ದು ಅಲ್ಲಿ ರಾತ್ರಿ 11ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕಿರಿಸಲಾಗುವುದು. ಬಳಿಕ ಅವರ ಹುಟ್ಟೂರು ಹಾಲಹಳ್ಳಿಗೆ ಕೊಂಡೊಯ್ದು ಬುಧವಾರ ಬೆಳಿಗ್ಗೆ 11ರ ವರೆಗೆ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ನಂತರ ವೀರಶೈವ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದರು.

Leave a Reply

comments

Related Articles

error: