ಸುದ್ದಿ ಸಂಕ್ಷಿಪ್ತ

ಮತದಾರರ ವಿಶೇಷ ನೋಂದಣಿ

ಮೈಸೂರು,.21-ಜಿಲ್ಲೆಯಲ್ಲಿ ಮತದಾರರ ವಿಶೇಷ ನೋಂದಣಿ ಆಂದೋಲನವನ್ನು ನ.23, 24 ಹಾಗೂ 25 ರಂದು ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಮೂನೆ-6, ತಿದ್ದುಪಡಿಗೆ ನಮೂನೆ-8, ಹೆಸರು ಕೈಬಿಡಲು ನಮೂನೆ -7, ಹಾಗೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಮತಗಟ್ಟೆಗೆ ವರ್ಗಾವಣೆಗೆ ನಮೂನೆ-8 ರಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸುವುದು.

ಅರ್ಜಿಗಳನ್ನು ಸಂಬಂಧಪಟ್ಟ ಮತದಾರರ ನೋಂದಾಣಾಧಿಕಾರಿ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳ ಕಚೇರಿ, ಮೈಸೂರು ಮಹಾನಗರ ಪಾಲಿಕೆಎಲ್ಲಾ ತಾಲ್ಲೂಕು ತಹಶೀಲ್ದಾರರ್ ಅವರ ಕಛೇರಿ ಅಥವಾ ಆಯಾ ಮತಗಟ್ಟೆಗಳಲ್ಲಿ ಬೂತ್ ಲೆವಲ್ ಅಧಿಕಾರಿಗಳಿಗೆ ಸಲ್ಲಿಸುವುದು.

ಮೈಸೂರು ಜಿಲ್ಲೆಯ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದರೂ ಸಹ ಹೊಸ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತ ಪಡಿಸಿಕೊಳ್ಳುವುದು. ಇಲ್ಲದಿದ್ದಲ್ಲಿ ಹೋಸದಾಗಿ ಸೇರ್ಪಡೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್ .ಜಿ. ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: