ಮೈಸೂರು

ಬುಧವಾರ ತೆರೆಕಾಣಲಿರುವ ಜಾಂಬೂರಿ ಉತ್ಸವ

jamboori-1ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಒಂದು ವಾರದ ಕಾಲ ನಡೆದ 17ನೇ ರಾಷ್ಟ್ರೀಯ ಜಾಂಬೂರಿ ಉತ್ಸವಕ್ಕೆ ಬುಧವಾರ ವೈಭವಯುತ ತೆರೆ ಬೀಳಲಿದೆ.

ಕಳೆದ ಒಂದು ವಾರದಿಂದ ನಡೆದ ಉತ್ಸವದಲ್ಲಿ ಪಾಲ್ಗೊಂಡ ವಿವಿಧ ರಾಜ್ಯದ ಹಾಗೂ ವಿದೇಶದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು, ಕಸರತ್ತುಗಳನ್ನು ಪ್ರದರ್ಶಿಸಿ ಜನಮನ ಗೆಲ್ಲುವಲ್ಲಿ ಯಶಸ್ವಿಯಾದರು.

ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಗಣ್ಯರು ಕಪ್ಪುಪಟ್ಟಿ ಧರಿಸಿ ವಿಶೇಷ ಗೌರವ ಸಲ್ಲಿಸಿದರು.

ವಿದ್ಯಾರ್ಥಿಗಳು ಬ್ಯಾಂಡ್ ವಾದನದೊಂದಿಗೆ ಆಕರ್ಷಕ ಪಥಸಂಚಲನ ನಡೆಸಿದರು. ಮೂವತ್ತೇಳು ರಾಜ್ಯಗಳ ತಂಡಗಳು ಸೌಹಾರ್ದತೆ ಮೂಡಿಸುವ ಒಂದೇ ಗೀತೆಗೆ ಹೆಜ್ಜೆ ಹಾಕಿದರು. ಸಾಂಪ್ರದಾಯಿಕ ವೇಷಭೂಷಣಗಳನ್ನು ಧರಿಸಿದ ಮಕ್ಕಳು ಸಾಂಪ್ರದಾಯಿಕ ನೃತ್ಯಗಳನ್ನು ಪ್ರದರ್ಶಿಸಿದರು. ಒಟ್ಟಿನಲ್ಲಿ ಮೂವತ್ತು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ ಜಾಂಬೂರಿ ಉತ್ಸವವನ್ನು ಯಶಸ್ವಿಗೊಳಿಸಿದ್ದರು.

ಬುಧವಾರ ಸರ್ವಧರ್ಮ ಪ್ರಾರ್ಥನೆ ನಡೆಯಲಿದ್ದು, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ವೀರೇಂದ್ರ ಹೆಗ್ಗಡೆ, ಬಿಷಪ್ ಥಾಮಸ್ ಆಂಥೋಣಿ ವಾಳಪಿಳ್ಳೈ, ಮೌಲಾನಾ ಉಸ್ಮಾನ್ ಷರೀಫ್ ಸಾಹೇಬ್ ಪಾಲ್ಗೊಳ್ಳಲಿದ್ದಾರೆ.

Leave a Reply

comments

Related Articles

error: