ಪ್ರಮುಖ ಸುದ್ದಿಮೈಸೂರು

ಕೆಎಸ್ಆರ್ ಟಿಸಿ ಸ್ಥಳೀಯ ಘಟಕದಿಂದ ಕನ್ನಡ ರಾಜ್ಯೋತ್ಸವ .29.

ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿಗೆ ಸಾಹಿತ್ಯ ರತ್ನ ಪ್ರಶಸ್ತಿ

ಮೈಸೂರು, ನ.22 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗಗಳ ಕನ್ನಡ ಕ್ರಿಯಾಸಮಿತಿ ವತಿಯಿಂದ ನ.29ರಂದು ಜಗನ್ಮೋಹನ ಅರಮನೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರ ವಿಭಾಗದ ಅಧ್ಯಕ್ಷ ಮಾ.ಷಡಕ್ಷರಿ ತಿಳಿಸಿದರು.

ಅಂದು ಮಧ್ಯಾಹ್ನ 3ಕ್ಕೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಕಾರ್ಯಕ್ರಮವನ್ನು ಉದ್ಘಾಟಿಸುವರು. ಪ್ರೊ.ಮಲೆಯೂರು ಗುರುಸ್ವಾಮಿ ಅವರಿಗೆ  ಸಾಹಿತ್ಯ ರತ್ನ ಪ್ರಶಸ್ತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಪ್ರದಾನ ಮಾಡಲಿದ್ದಾರೆ. ಸಂಸ್ಕೃತಿ ಮತ್ತು ಶರಣ ತತ್ವ ಚಿಂತಕ ಶಂಕರ್ ದೇವನೂರು, ಸಂಸದರಾದ ಪ್ರತಾಪ್ ಸಿಂಹ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಡಾ.ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್ ಸೇರಿದಂತೆ ವಿಭಾಗೀಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗುರುವಾರ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿ ಪ್ರತಿಭಾ ಪುರಸ್ಕಾರ ನೆರವೇರಿಸಲಾಗುವುದು, ಕಾರ್ಮಿಕರಿಗೆ ಕನ್ನಡ ಶ್ರೀ ಪ್ರಶಸ್ತಿ ರಾಜ್ಯೋತ್ಸವದ ಅಂಗವಾಗಿ ಅಂದು ಮಧ್ಯಾಹ್ನ 3 ಗಂಟೆಯಿಂದ ಕೋಟೆ ಆಂಜನೇಯ ದೇವಸ್ಥಾನದಿಂದ ಕಾರ್ಯಕ್ರಮದ ಆವರಣದವರೆಗೆ ಭುವನೇಶ್ವರಿ ದೇವಿ ಮೆರವಣಿಗೆಯೊಂದಿಗೆ ಜಾಥಾ ನಡೆಸಲಾಗುವುದು ಎಂದು ತಿಳಿಸಿದರು.

ಸಂಘದ ಪದಾಧಿಕಾರಿಗಳಾದ ಸಿ.ಡಿ.ವಿಶ್ವನಾಥ್, ಪ್ರಕಾಶ್, ವೀರಭದ್ರಯ್ಯ, ರಾಮಮೂರ್ತಿ ಇನ್ನಿತರರು ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

Leave a Reply

comments

Related Articles

error: