ಮೈಸೂರು

ಕನಕ ಜಯಂತಿ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು,ನ.23-ಸಂತ ಶ್ರೀ ಕನಕದಾಸರ ಜಯಂತ್ಯೋತ್ಸವ ಸಮಿತಿ ವತಿಯಿಂದ ಶ್ರೀ ಭಕ್ತ ಕನಕದಾಸರ 531ನೇ ಜಯಂತ್ಯೋತ್ಸವ ಪ್ರಯುಕ್ತ ಶುಕ್ರವಾರ ಕನಕ ಜಯಂತಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಚಾಲನೆ ನೀಡಿದರು. ಈ ಪ್ರಚಾರ ವಾಹನವು ನಗರ, ತಾಲೂಕಿನ ಎಲ್ಲ ಕಡೆಗೂ ತೆರಳಿ ಕನಕದಾಸರ ಬಗ್ಗೆ ಪ್ರಚಾರ ಮಾಡಲಿದೆ.

ಜಯಂತ್ಯೋತ್ಸವ ಕಾರ್ಯಕ್ರಮವನ್ನು ನ.26 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿದ್ದು, ನ.26 ರಂದು ಬೆಳಿಗ್ಗೆ 9 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಿಂದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯು ಕೆ.ಆರ್.ವೃತ್ತ, ನ್ಯೂ ಸಯ್ಯಾಜಿರಾವ್ ರಸ್ತೆ, ನೂರಡಿ ರಸ್ತೆ, ನಾರಾಯಣ ಶಾಸ್ತ್ರಿ ರಸ್ತೆ, ಡಿ.ದೇವರಾಜ ಅರಸು ರಸ್ತೆ, ವಿನೋಬಾ ರಸ್ತೆಯ ಮಾರ್ಗವಾಗಿ ಕಲಾಮಂದಿರವನ್ನು ತಲುಪಲಿದೆ. ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ನ.27, 28 ರಂದು ಜಗನ್ಮೋಹನ ಅರಮನೆಯಲ್ಲಿ ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಈ ಸಂದರ್ಭದಲ್ಲಿ ನಗರಪಾಲಿಕೆ ಸದಸ್ಯ ಗೋಪಿ, ಬ್ಯಾಂಕ್ ಪುಟ್ಟಸ್ವಾಮಿ, ಮಾಜಿ ನಗರಪಾಲಿಕೆ ಸದಸ್ಯರಾದ ಎಂ.ಕೆ.ಶಂಕರ್, ಶಿವಣ್ಣ, ಚೌಹಳ್ಳಿ ಪುಟ್ಟಸ್ವಾಮಿ, ಎಪಿಎಂಸಿ ಅಧ್ಯಕ್ಷ ಪ್ರಭುಸ್ವಾಮಿ ಇತರರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: