ಮೈಸೂರು

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಮೈಸೂರು-ಬೆಂಗಳೂರು ಮಾರ್ಗದ ಬೆಳವಾಡಿ ಬಳಿ ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅಪರಿಚಿತ ಯುವಕನ ವಯಸ್ಸು ಸುಮಾರು 25 ರಿಂದ 30 ಇರಬೇಕೆಂದು ಅಂದಾಜಿಸಲಾಗಿದೆ. ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ಕಾರಣ ತಲೆ ಛಿದ್ರವಾಗಿದೆ. ಈತನ ಕುರಿತು ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈತನ ಎತ್ತರ 5.6 ಇದ್ದು, ಬ್ಲಾಕ್ ಟ್ರ್ಯಾಕ್ ಪ್ಯಾಂಟ್ ಮತ್ತು ಬಿಳಿಯ ಬಣ್ಣದ ಟೀ ಶರ್ಟ್ ಧರಿಸಿದ್ದಾನೆ.  ಶವವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವಾರೀಸುದಾರರಿದ್ದಲ್ಲಿ ಮೈಸೂರು ರೈಲ್ವೆ ಪೊಲೀಸರನ್ನು ಸಂಪರ್ಕಿಸಬಹುದು.

Leave a Reply

comments

Related Articles

error: