ಸುದ್ದಿ ಸಂಕ್ಷಿಪ್ತ

ಸಹಾಯಧನ : ಅರ್ಜಿ ಆಹ್ವಾನ

ಮೈಸೂರು,ನ.23- ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ 2018-19 ನೇ ಸಾಲಿನಲ್ಲಿ ಸಂಚಾರಿ ಮಾಂಸ ಹಾಗೂ ಮಾಂಸದಿಂದ ತಯಾರಿಸಿದ ಖಾದ್ಯ ವಸ್ತುಗಳ ಮಾರಾಟ ಮಳಿಗೆ ಸ್ಥಾಪನೆ ಯೋಜನೆಯಡಿ ಸಹಾಯಧನ ಪಡೆಯಲು ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ತಾಲ್ಲೂಕು ಸಹಾಯಕ ನಿರ್ದೇಶಕರು, ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಯಿಂದ ಪಡೆದು ಡಿಸೆಂಬರ್ 20 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ನಿರ್ದೇಶಕರು, ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿ., ಮಾನಂದವಾಡಿ ರಸ್ತೆ ಚಾಮುಂಡಿಪುರಂ ಮೈಸೂರು ದೂ.ಸಂ. 0821 2488830 ಅನ್ನು ಸಂಪರ್ಕಿಸಬಹುದು. (ಎಂ.ಎನ್)

Leave a Reply

comments

Related Articles

error: