ಸುದ್ದಿ ಸಂಕ್ಷಿಪ್ತ

ಸಮೃದ್ಧಿ ಯೋಜನೆ : ಅರ್ಜಿ ಆಹ್ವಾನ

ಮೈಸೂರು,ನ.23-ಕರ್ನಾಟಕ ಭೋವಿ ಅಭಿವೃದ್ಧಿ ನಿಗಮವು ಗ್ರಾಮೀಣ/ನಗರ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿಯ ಭೋವಿ ಜನಾಂಗದ ನಿರುದ್ಯೋಗಿ ಯುವಕ/ಯುವತಿಯರನ್ನು ಉದ್ಯಮ ಶೀಲರನ್ನಾಗಿಸಲು `ಸಮೃದ್ಧಿ ಯೋಜನೆ’ ಅನುಷ್ಟಾನಗೊಳಿಸಲು ಉದ್ದೇಶಿಸಿದೆ.

ಸದರಿ ಯೋಜನೆಯಡಿ ಪರಿಶಿಷ್ಟ ಜಾತಿಯ ಭೋವಿ ಜನಾಂಗದ ನಿರುದ್ಯೋಗಿಗಳಿಗೆ ವಿವಿಧ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಹಾಗೂ ಲಾಭದಾಯಕವಾಗಿ ನಡೆಸಲು ಅಗತ್ಯವಾದ ಉದ್ಯಮಶೀಲತಾ ತರಬೇತಿ/ವೃತ್ತಿ ಕೌಶಲ್ಯ ತರಬೇತಿಯನ್ನು ನೀಡಿ ಮಾರುಕಟ್ಟೆ ವ್ಯವಸ್ಥೆಯೊಂದಿಗೆ ಘಟಕಗಳನ್ನು ಸೃಷ್ಟಿಸಲು ವ್ಯವಸ್ಥೆ ಮಾಡಲಾಗುವುದು. ಆಯ್ಕೆಯಾದ ಪ್ರತೀ ಫಲಾನುಭವಿಗೆ ಗರಿಷ್ಟ ರೂ.10.00 ಲಕ್ಷಗಳವರೆಗೆ ಆರ್ಥಿಕ ಬೆಂಬಲ ಒದಗಿಸಲಾಗುತ್ತದೆ.

ಉತ್ತಮ ಮಾರುಕಟ್ಟೆ ಹೊಂದಿರುವ ಸರ್ಕಾರಿ ಮತ್ತು ಖಾಸಗಿ ಬ್ರಾಂಡೆಡ್ ಸಂಸ್ಥೆಗಳ ಸಹಯೋಗದಲ್ಲಿ ಫ್ರಾಂಚೈಸಿ/ಡಿಲರ್‍ಶೀಪ್ ವ್ಯವಸ್ಥೆಯೊಂದಿಗೆ ರಿಟೈಲ್ ವ್ಯಾಪಾರಿ ಮಳಿಗೆಗಳನ್ನು ಆರಂಭಿಸಲು  ಅಗತ್ಯವಾದ ತಾಂತ್ರಿಕ ಬೆಂಬಲ ಹಾಗೂ ಆರ್ಥಿಕ ಬೆಂಬಲ ನೀಡಿ ಯಶಸ್ವಿ ಉದ್ದಿಮೆದಾರರನ್ನಾಗಿ ಮಾಡುವುದು ಈ ಯೋಜನೆಯ ಉದ್ದೇಶವಾಗಿರುತ್ತದೆ. ಈಗಾಗಲೇ ಸರ್ಕಾರಿ ಮತ್ತು ಬ್ರಾಂಡ್‍ಡ್ ಸಂಸ್ಥೆಗಳ ಜೊತೆ ಸರ್ಕಾರವು ಒಡಂಬಡಿಕೆ (ಎಂಓಯು) ಮಾಡಿಕೊಳ್ಳಲು ವ್ಯವಸ್ಥೆಯಾಗಿರುತ್ತದೆ.

ಅರ್ಜಿದಾರರು 21 ವರ್ಷದಿಂದ 50 ವರ್ಷದವರೆಗಿನ ವಯೋಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು 1,50,000 ರೂ. ಗ್ರಾಮೀಣ ಹಾಗೂ 2,00,000 ರೂ. ನಗರ ಪ್ರದೇಶದವರಿಗೆ ಮಿತಿಯೊಳಗಿರಬೇಕು.

ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅವಶ್ಯವಿರುವ ಸ್ಥಳಾವಕಾಶವನ್ನು ಹೊಂದಿರಬೇಕು
ಅರ್ಜಿದಾರರು/ಕುಟುಂಬದ ಅವಲಂಭಿತ ಯಾವುದೇ ಸದಸ್ಯರು ಈ ಹಿಂದೆ ನಿಗಮ/ ಸರ್ಕಾರದಿಂದ 1,00,000 ರೂ.  ಮೇಲ್ಪಟ್ಟು ಸೌಲಭ್ಯ ಪಡೆದಿದ್ದಲ್ಲಿ, ಅಂತಹ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ನಂ. 9/ಎ, ಎಸ್.ಬಿ.ಎಂ ಜೋನಲ್ ಕಛೇರಿ ಕಟ್ಟಡದ 3ನೇ ಮಹಡಿ,ಸಾಹುಕಾರ್ ಚನ್ನಯ್ಯ ರಸ್ತೆ, ಚಾಮರಾಜಮೊಹಲ್ಲಾ, ಸರಸ್ವತಿಪುರಂ, ಮೈಸೂರು  ದೂ.ಸಂ. 0821-2332480 ಅನ್ನು ಸಂಪರ್ಕಿಸುವುದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: