ಮೈಸೂರು

ಇನ್ಫೋಸಿಸ್ ಹೈದ್ರಾಬಾದ್ ಘಟಕದ ಉದ್ಯೋಗಿ ಮೈಸೂರಿನಲ್ಲಿ ಆತ್ಮಹತ್ಯೆ

ಮೈಸೂರು,ನ.24:- ಇನ್ಫೋಸಿಸ್ ಹೈದ್ರಾಬಾದ್ ಘಟಕದ ಉದ್ಯೋಗಿಯೋರ್ವರು ಮೈಸೂರಿನಲ್ಲಿರುವ ಸ್ನೇಹಿತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹೈದ್ರಾಬಾದ್ ನ ಸಂದೀಪ್(22) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಇವರು ಮೈಸೂರಿನ ವಿಜಯನಗರದಲ್ಲಿರುವ ತನ್ನ ಸ್ನೇಹಿತನ ಮನೆಗೆ ಬಂದಿದ್ದರು. ಸ್ನೇಹಿತ ಅಪಾರ್ಟ್ ಮೆಂಟ್ ಒಂದರಲ್ಲಿ ವಾಸವಿದ್ದ. ಆತ ಹೊರಹೋಗಿದ್ದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಜಯನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಮಡು ಮುಂದಿನ ಕ್ರಮ ಕೈಗೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: