
ಪ್ರಮುಖ ಸುದ್ದಿಮೈಸೂರು
ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರ ಭದ್ರತಾ ಸಿಬ್ಬಂದಿಗೆ ಅಪರಿಚಿತ ಕಾರು ಡಿಕ್ಕಿ
ರಾಜ್ಯ(ಮಂಡ್ಯ)ನ.24:- ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರ ಭದ್ರತಾ ಸಿಬ್ಬಂದಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೇಲುಕೋಟೆ ಪ್ರವಾಸದಲ್ಲಿರುವ ಹೆಚ್ಡಿಕುಮಾರಸ್ವಾಮಿ ಅವರೊಂದಿಗೆ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಪಾಲಾಕ್ಷ ತೆರಳಿದ್ದರು. ಈ ವೇಳೆ ಕಾರೊಂದು ಗುದ್ದಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡರು. ತಕ್ಷಣವೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಎಸಗಿದ ಕಾರನ್ನು ಪೊಲೀಸರು ಪತ್ತೆಹಚ್ಚಿದ್ದು, ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. (ಕೆ.ಎಸ್,ಎಸ್.ಎಚ್)