ಮೈಸೂರು

ಸಚಿವರ ಅಂತಿಮ ದರ್ಶನ ಪಡೆದ ಬಿಎಸ್ ವೈ: ಕುಟುಂಬಿಕರಿಗೆ ಸಾಂತ್ವನ

bjp-2ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಿಕ್ಕಮಗಳೂರಿನಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಸಹಕಾರಿ ಮತ್ತು ಸಕ್ಕರೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಅವರ ಪಾರ್ಥಿವ ಶರೀರದ ದರ್ಶನ ಪಡೆದರು.

ಸಚಿವರ ಊರಾದ ಹಾಲಹಳ್ಳಿಯಲ್ಲಿ ಬುಧವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು. ಈ ಸಂದರ್ಭ ಭೇಟಿ ನೀಡಿದ ಯಡಿಯೂರಪ್ಪ ಸಚಿವರಿಗೆ ಅಂತಿಮ ನಮನ ಸಲ್ಲಿಸಿದರಲ್ಲದೇ ಅವರ ಪತ್ನಿ ಗೀತಾ ಅವರಿಗೆ ಸಾಂತ್ವನ ಹೇಳಿದರು. ಮನೆಯ ಯಜಮಾನರನ್ನು  ಕಳೆದುಕೊಂಡ ಕುಟುಂಬಿಕರ ರೋದನ ಮುಗಿಲು ಮುಟ್ಟಿತ್ತು. ಈ ಸಂದರ್ಭ ಮಾತನಾಡಿದ ಅವರು ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಕುಟುಂಬಿಕರಿಗೆ ದುಃಖಭರಿಸುವ ಶಕ್ತಿ ನೀಡಲಿ. ಅಜಾತಶತ್ರು, ಸರಳ ಸಜ್ಜನಿಕೆಯ ರಾಜಕಾರಣಿಯನ್ನು ಕಳೆದುಕೊಂಡು ನಾಡು ಬಡವಾಗಿದೆ ಎಂದರು.  ಬಿಜೆಪಿಯ ಕೆಲವು ನಾಯಕರು ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದು ಅಶ್ರುತರ್ಪಣ ನೀಡಿದರು.

Leave a Reply

comments

Related Articles

error: