ಕರ್ನಾಟಕಪ್ರಮುಖ ಸುದ್ದಿ

ಮೀಸಲಾತಿ ನಿಗದಿ, ಆಯ್ಕೆ ವಿಧಾನ: ಕೋರ್ಟ್ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು (ನ.23): ಜೂನ್ 20, 1995 ರ ಸರ್ಕಾರಿ ಆದೇಶ ಸಂಖ್ಯೆ: ಸಿ ಆ ಸು ಇ : 08 : ಸೆ ಹಿ ಮ : 95 ದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸುವಾಗ ಯಾವ ರೀತಿ ಆಯ್ಕೆ ವಿಧಾನವನ್ನು ಅನುಸರಿಸಬೇಕು ಎಂಬುದನ್ನು ಸ್ಪಪಷ್ಟಪಡಿಸಲಾಗಿದೆ.

ಇದನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವತ್ತ ಕಳೆದ 23 ವರ್ಷಗಳಿಂದಲೂ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ 27674/2012 ರಲ್ಲಿ ಹೊರಡಿಸಿರುವ ತೀರ್ಪಿನಲ್ಲಿ ಮಾರ್ಗಸೂಚಿಯನ್ನು ನಿಗದಿಪಡಿಸಲಾಗಿದೆ. ಅಲ್ಲದೆ, ಅದನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ.

ಈ ರಿಟ್ ಅರ್ಜಿಯಲ್ಲಿ ಅನುಸರಿಸಲು ಸೂಚಿಸಿರುವ ಮಾರ್ಗಸೂಚಿಯು ಆ ರಿಟ್ ಅರ್ಜಿಯಲ್ಲಿ ಇರುವಂತಹ ಪ್ರಕರಣಕ್ಕೆ ಮಾತ್ರವೇ ಸಂಬಂದಿಸಿದ್ದಾಗಿರುತ್ತದೆ. ಮೇಲಾಗಿ ಆ ತೀರ್ಪಿನ ವಿರುದ್ಧ ಸರ್ಕಾರವು ಮರುಪರಿಶೀಲನಾ ಅರ್ಜಿಯನ್ನು ದಾಖಲಿಸಿರುತ್ತದೆ. ಆದರೂ ಕೂಡಾ ನಿರ್ದೇಶನ ನೀಡಿರುವುದು ಪರಿಶಿಷ್ಟ ಜಾತಿ/ವರ್ಗಗಳ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗಿರುವುದರಿಂದ ತಾವು ಅದನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ.

ಈ ತೀರ್ಪಿನಲ್ಲಿ ನೀಡಿರುವ ಮಾರ್ಗಸೂಚಿಯನ್ನು ಅನುಸರಿಸುವುದರಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳು ಸಾಮಾನ್ಯ ವರ್ಗದ ಕೋಟಾದ ಅಡಿಯಲ್ಲಿ ಹುದ್ದೆಗಳನ್ನು ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ.

ಮುಖ್ಯಮಂತ್ರಿಗಳ ಜೊತೆಯಲ್ಲಿ ಹಾಗೂ ಸಚಿವ ಸಂಪುಟದಲ್ಲಿ ಈ ವಿಷಯ ಪ್ರಸ್ತಾಪಿಸಿ ಈ ವರ್ಗಗಳಿಗೆ ಅನ್ಯಾಯವಾಗದಂತೆ ಸರಿಪಡಿಸಲು ಕ್ರಮಗೊಳ್ಳಲಾಗುವುದು ಎಂದು ಪುಟ್ಟರಂಗ ಶೆಟ್ಟಿ ಅವರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: