ಸುದ್ದಿ ಸಂಕ್ಷಿಪ್ತ

ನ.26 ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಕವಿಗೋಷ್ಠಿ

ಮೈಸೂರು,ನ.24-ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿಜಯನಗರ 1ನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ನ.26 ರಂದು ಸಂಜೆ 5 ಗಂಟೆಗೆ ವಿಜಯನಗರದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಶಾಸಕ ಎಲ್.ನಾಗೇಂದ್ರ ಆಗಮಿಸಲಿದ್ದಾರೆ. ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. (ಎಂ.ಎನ್)

Leave a Reply

comments

Related Articles

error: