
ಪ್ರಮುಖ ಸುದ್ದಿ
ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಫರ್ ಶರೀಫ್ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಂಬನಿ
ರಾಜ್ಯ(ಬೆಂಗಳೂರು)ನ.26:- ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಫರ್ ಶರೀಫ್ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದ್ದಾರೆ.
“ಜಾಫರ್ ಷರೀಫ್ರ ನಿಧನದಿಂದ ಅತೀವ ದುಃಖವಾಗಿದೆ. ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ, ಸ್ವಪ್ರಯತ್ನದಿಂದ ರಾಷ್ಟ್ರರಾಜಕಾರಣದ ಪ್ರಮುಖ ನಾಯಕರಾಗಿ ಶರೀಫ್ ಅವರು ಬೆಳೆದಿದ್ದರು. ರೈಲ್ವೆ ಸಚಿವರಾಗಿ ಕರ್ನಾಟಕಕ್ಕೆ ಅವರ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದು ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. (ಕೆ.ಎಸ್,ಎಸ್.ಎಚ್)