ದೇಶಪ್ರಮುಖ ಸುದ್ದಿ

ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಪ್ರಕಟ : ಫೆ.4ರಿಂದ ಮತದಾನ, ಮಾ.11ಕ್ಕೆ ಫಲಿತಾಂಶ

ಹೊಸದಿಲ್ಲಿ: ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ದೇಶದ ಅತಿ ದೊಡ್ಡ ರಾಜ್ಯವಾದ ಉತ್ತರಪ್ರದೇಶದಲ್ಲಿ 7 ಹಂತಗಳಲ್ಲಿ, ಮಣಿಪುರದಲ್ಲಿ 2 ಹಂತಗಳಲ್ಲಿ, ಪಂಜಾಬ್, ಗೋವಾ ಮತ್ತು ಉತ್ತರಾಖಂಡಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಮಾರ್ಚ್ 11ರಂದು ಫಲಿತಾಂಶ ಪ್ರಕಟವಾಗಲಿದೆ.

55269040ಐದು ರಾಜ್ಯಗಳ ಚುನಾವಣೆಯಲ್ಲಿ 16 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಇಂದಿನಿಂದಲೇ ರಾಜಕೀಯ ಪಕ್ಷಗಳಿಗೆ, ಅಭ್ಯರ್ಥಿಗಳಿಗೆ ಹಾಗೂ ರಾಜ್ಯ ಸರ್ಕಾರಗಳಿಗೆ ನೀತಿ ಸಂಹಿತೆ ಅನ್ವಯವಾಗುವುದು ಎಂದು ಚುನಾವಣೆ ಆಯೋಗ ತಿಳಿಸಿದೆ.

ಉತ್ತರ ಪ್ರದೇಶ, ಪಂಜಾಬ್ ಹಾಗೂ ಉತ್ತರಾಖಂಡ ರಾಜ್ಯದ ಅಭ್ಯರ್ಥಿಗಳಿಗೆ 28 ಲಕ್ಷ ರೂಪಾಯಿ, ಗೋವಾ ಮತ್ತು ಮಣಿಪುರದಲ್ಲಿ 20 ಲಕ್ಷ ರೂಪಾಯಿಗಳನ್ನು ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿ ಎಂದು ನಿಗದಿಗೊಳಿಸಲಾಗಿದೆ.

ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳಿಗೆ ಫೆ.11 ರಿಂದ ಮಾ.8ರ ವರೆಗೆ 7 ಹಂತದ ಮತದಾನ ನಡೆಯಲಿದೆ. ಪಂಜಾಬ್‍ ಮತ್ತು ಗೋವಾದಲ್ಲಿ, ಫೆ.4ರಂದು. ಮಣಿಪುರದಲ್ಲಿ ಮಾರ್ಚ್ 4 ರಂದು ಮತ್ತು 2ನೇ ಹಂತದಲ್ಲಿ ನಡೆಯುವ ಚುನಾವಣೆಗೆ ಮಾರ್ಚ್ 8 ರಂದು ಮತದಾನ ನಡೆಯಲಿದೆ.

5 ರಾಜ್ಯಗಳ ಚುನಾವಣೆಗೆ ಕೇಂದ್ರ ಗೃಹ ಸಚಿವಾಲಯವೂ 85 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಿದೆ. ಇದರೊಟ್ಟಿಗೆ ರಾಜ್ಯ ಶಸಸ್ತ್ರದಳ, ಮೀಸಲು ಪಡೆಗಳು ಮತದಾನದ ವೇಳೆ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಪಾಲನೆ ಮಾಡಲಿವೆ.

 

Leave a Reply

comments

Related Articles

error: