ಪ್ರಮುಖ ಸುದ್ದಿಮೈಸೂರು

ಡಿ.8,9ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ 62ನೇ ಪರಿನಿಬ್ಬಾಣ : ರಾಜ್ಯ ಸರ್ವ ಸದಸ್ಯರ ಮಹಾ ಸಭೆ

ಮೈಸೂರು,ನ.28 : ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಬಾಬಾ ಸಾಹೇಬ್ ಅಂಬೇಡ್ಕರ್ ಅವರ 62ನೇ ಪರಿನಿಬ್ಬಾಣ ದಿನಾಚರಣೆ ಹಾಗೂ ರಾಜ್ಯ ಸರ್ವ ಸದಸ್ಯರ ಮಹಾಸಭೆಯನ್ನು ಡಿ.8,9ರಂದು ರಾಜಧಾನಿ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ ಎಂದು ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.

ಕಾರ್ಯಕ್ರಮದಂಗವಾಗಿ ಡಿ.8ರಂದು ಬೆಳಗ್ಗೆ 11 ಗಂಟೆಗೆ ಟಿಪ್ಪು ಜನ್ಮಸ್ಥಳದಿಂದ ಮಿನಿ ವಿಧಾನಸೌಧದವರೆಗೂ ಮೆರವಣಿಗೆ ನಡೆಯಲಿದ್ದು, ವಿಧಾನಸೌಧ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಮೆರವಣಿಗೆಯಲ್ಲಿ 3 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿ.9ರಂದು ನಡೆಯುವ ಗೋಷ್ಠಿಯಲ್ಲಿ ಹಿರಿಯ ಚಿಂತಕ ಪ್ರೋ.ಗೋವಿಂದರಾವ್, ಕನ್ನಡ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಇವರೊಂದಿಗೆ ಹಲವು ವಿಧ್ವಾಂಸರು ಪಾಲ್ಗೊಂಡು ಉಪನ್ಯಾಸ, ಸಂವಾದ ನಡೆಸಲಿದ್ದಾರೆ. 29 ಜಿಲ್ಲೆಯ ಪದಾಧಿಕಾರಿಗಳು ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಸಮಾಜವು ಇಂದಿಗೂ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸಮಿತಿಯ ನರಸೂರು ಮುನಿಕೃಷ್ಣಪ್ಪ, ಜಿಲ್ಲಾ ಪ್ರಧಾನ ಸಂಚಾಲಕ ನಿಂಗರಾಜ್ ಮಲ್ಲಾಡಿ, ಕಾರ್ಯಬಸವಣ್ಣ, ದೊಡ್ಡಸಿದ್ಧು ಹಾದನೂರು, ಕೆ.ನಂಜಪ್ಪ ಬಸವನಗುಡಿ, ಪುಟ್ಟಲಕ್ಷ್ಮಮ್ಮ ಮೊದಲಾದವರು ಗೋಷ್ಠಿಯಲ್ಲಿ ಇದ್ದರು. (ವರದಿ : ಕೆ.ಎಂ.ಆರ್)

 

Leave a Reply

comments

Related Articles

error: