ಸುದ್ದಿ ಸಂಕ್ಷಿಪ್ತ

ಅಪರಿಚಿತ ಮೃತ ವ್ಯಕ್ತಿ ವಿಳಾಸ ಪತ್ತೆಗೆ ಮನವಿ

ಮಂಡ್ಯ (ನ.28): ಮಹದೇವಪುರ ಬೋರೆ ಗ್ರಾಮದ ಬಳಿಯ ಬರ್ಗಿ ಉಪನಾಲೆಯ 2ನೇ ಮೈಲಿಯಲ್ಲಿ ಸುಮಾರು 40-45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ವ್ಯಕ್ತಿಯ ವಿಳಾಸ ಪತ್ತೆಯಾಗಿರುವುದಿಲ್ಲ. ವ್ಯಕ್ತಿಯು ಎಣ್ಣೆಗೆಂಪು ಮೈಬಣ್ಣ, ದುಂಡುಮುಖ, ದೃಢಕಾಯ ಶರೀರ ಹೊಂದಿದ್ದು, ವ್ಯಕ್ತಿ ವಿಳಾಸ ಪತ್ತೆಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ಅರಕೆರೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.

ಅಪರಿಚಿತ ಮೃತ ವ್ಯಕ್ತಿ ವಿಳಾಸ ಪತ್ತೆಗೆ ಮನವಿ:

ಮಂಡ್ಯ ಯಲಿಯೂರು ರೈಲ್ವೆ ನಿಲ್ದಾಣದ ಬಳಿ ಸುಮಾರು 45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದು, ವ್ಯಕ್ತಿಯ ವಿಳಾಸ ಪತ್ತೆಯಾಗಿರುವುದಿಲ್ಲ. ವ್ಯಕ್ತಿಯು 53/4 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ದೃಢಕಾಯ ಶರೀರ ಹೊಂದಿದ್ದು, ವ್ಯಕ್ತಿ ವಿಳಾಸ ಪತ್ತೆಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ಆರಕ್ಷಕ ಉಪನಿರೀಕ್ಷಕರು, ರೈಲ್ವೆ ಪೊಲೀಸ್ ಹೊರಉಪಠಾಣೆಯನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: