ಕರ್ನಾಟಕಪ್ರಮುಖ ಸುದ್ದಿ

ಬರ ಪರಿಸ್ಥಿತಿಯ ಕಾರಣ ಹಂಪಿ ಉತ್ಸವ ರದ್ದು: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು (ನ.28): ಈ ಬಾರಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಆಚರಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಅವರು ಈ ಮಾಹಿತಿ ನೀಡಿದ್ದಾರೆ.

ರಾಜ್ಯದ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಉತ್ಸವ ಆಚರಿಸುವುದು ಅಷ್ಟುಸೂಕ್ತವಲ್ಲ ಎಂಬ ಕಾರಣಕ್ಕೆ ಈ ವರ್ಷ ನಡೆಯಬೇಕಿದ್ದ ಹಂಪಿ ಉತ್ಸವವನ್ನು ರದ್ದು ಮಾಡಲಾಗಿದೆ. ಮುಂದಿನ ವರ್ಷ ಉತ್ಸವವನ್ನು ಅದ್ಧೂರಿಯಾಗಿ ನಡೆಸುವ ಕುರಿತು ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಕಳೆದ ವರ್ಷ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ಸಾಕಷ್ಟುಅನುದಾನ ಬಿಡುಗಡೆ ಮಾಡಿತ್ತು ಎಂದ ಅವರು, ಈ ಬಾರಿಯೂ ಹಂಪಿ ಉತ್ಸವ ನಡೆಸುವಂತೆ ಕಲಾವಿದರಿಂದ ಒತ್ತಾಯ ಕೇಳಿಬಂದಿದೆ. ಆದರೆ, ಬರ ಪರಿಸ್ಥಿತಿಯಿಂದಾಗಿ ಅನಿವಾರ್ಯವಾಗಿ ಉತ್ಸವ ಮುಂದೂಡಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.

ರೈತರ ಸಾಲಮನ್ನಾ ಪರಿಣಾಮ ಹಲವು ಯೋಜನೆಗಳ ಅನುದಾನಗಳನ್ನು ಕಡಿತ ಮಾಡಿದ ರಾಜ್ಯ ಸರ್ಕಾರ ಈ ಹಿಂದೆ ಪ್ರತಿ ವರ್ಷ ಬಜೆಟ್‌ನಲ್ಲಿಯೇ ಹಂಪಿ ಉತ್ಸವಕ್ಕಾಗಿ ಅನುದಾನ ಘೋಷಣೆ ಮಾಡುತ್ತಿತ್ತು. ಆದರೆ ಈ ಬಾರಿ ಬಜೆಟ್‌ನಲ್ಲಿ ಹಂಪಿ ಉತ್ಸವಕ್ಕೆ ಅನುದಾನ ಮೀಸಲು ಇಡಲಾಗಿರಲಿಲ್ಲ. ಇದರಿಂದಾಗಿ ಈ ವರ್ಷ ಐತಿಹಾಸಿಕ ಹಂಪಿ ಉತ್ಸವ ನಡೆಯುವ ಕುರಿತು ಸಂಶಯ ವ್ಯಕ್ತವಾಗಿತ್ತು. ಅದು ಇದೀಗ ನಿಜವಾಗಿದೆ. (ಎನ್.ಬಿ)

Leave a Reply

comments

Related Articles

error: