ಮೈಸೂರು

ಆದಿದ್ರಾವಿಡ ಜನಾಂಗದವರಿಂದ ಸ್ವಚ್ಛತಾಕಾರ್ಯ

ಕರ್ನಾಟಕ ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಆದಿ ದ್ರಾವಿಡ ಯುವಕರ ಅಭಿವೃದ್ಧಿ ಮಹಾಸಂಘ, ಕರ್ನಾಟಕ ರಾಜ್ಯ ಆದಿ ದ್ರಾವಿಡ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಕೆ.ಆರ್.ಕ್ಷೇತ್ರ ವಲಯ ಕಚೇರಿ 1, 2 ಮತ್ತು 6ರಲ್ಲಿ 45 ಮಂದಿ ಗುರುವಾರ ಉಚಿತವಾಗಿ ಸ್ವಚ್ಛತಾಕಾರ್ಯದಲ್ಲಿ ತೊಡಗಿಸಿಕೊಂಡರು.

ಸ್ವಚ್ಛತಾ ಕಾರ್ಯಕ್ಕೆ ಮೇಯರ್ ಎಂ.ಜೆ. ರವಿಕುಮಾರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೈಸೂರು ಈಗಾಗಲೇ ಎರಡು ಬಾರಿ ಸ್ವಚ್ಛ ನಗರಿ ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಬಾರಿಯೂ ಸ್ವಚ್ಛ ನಗರಿ ಎಂಬ ಪಟ್ಟಿಯಲ್ಲಿ ಮೈಸೂರು ಮೊದಲ ಸ್ಥಾನವನ್ನು ಕಾಯ್ದುಕೊಳ್ಳಬೇಕು. ಈ ಪ್ರಯುಕ್ತ ಕೆ.ಆರ್. ಕ್ಷೇತ್ರದ ವಲಯ ಕಚೇರಿಯ ಆದಿ ದ್ರಾವಿಡ ಪೌರಕಾರ್ಮಿಕ ಜನಾಂಗದವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭ ಸಂಘದ ರಾಜ್ಯಾಧ್ಯಕ್ಷ ಆರ್.ಶಿವಣ್ಣ, ಹೋರಾಟ ಸಮಿತಿ ಅಧ್ಯಕ್ಷ ಪಿ.ಮಂಜುನಾಥ, ಪ್ರಧಾನ ಕಾರ್ಯದರ್ಶಿ ಆರ್.ಆರ್. ರಮೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ವಡಿವೇಲು, ನಗರ ಕಾರ್ಯಾಧ್ಯಕ್ಷ ರಂಗಸ್ವಾಮಿ, ನಗರಪಾಲಿಕೆ ಸಂಘದ ಪ್ರಧಾನ ಕಾರ್ಯದರ್ಶಿ ಮಂಚಯ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: