ಮೈಸೂರು

ನಂಜನಗೂಡು ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ : ಧ್ರುವ ನಾರಾಯಣ

ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಗುರುವಾರ ನಂಜನಗೂಡು ಭಾಗದ ಮುಖಂಡರ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಯಾರಾದರೆ ಒಳಿತಾಗಲಿದೆ ಎಂದು ಅಭಿಪ್ರಾಯ ಪಡೆದುಕೊಳ್ಳಲಿದ್ದಾರೆ. ಆದರೆ ನಾನು ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದೇನೆ ಎಂದು ಸಂಸದ ಆರ್. ಧ್ರುವನಾರಾಯಣ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಧ್ರುವನಾರಾಯಣ, ಹಿರಿಯ ಮುಖಂಡರಾಗಿದ್ದ ಎಚ್.ಎಸ್ ಮಹದೇವಪ್ರಸಾದ್ ಅವರ ಹಠಾತ್ ನಿಧನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಪ್ರತಿ ಚುನಾವಣೆಯಲ್ಲೂ ಪಕ್ಷದ ಗೆಲುವಿನಲ್ಲಿ ಮಹದೇವಪ್ರಸಾದ್ ಅವರ ಕೊಡುಗೆ ಹೆಚ್ಚಾಗಿತ್ತು. ಅವರ ಹಠಾತ್ ನಿಧನದಿಂದಾಗಿ ನಮಗೆಲ್ಲಾ ಆಘಾತವಾಗಿದೆ. ಮಹದೇವಪ್ರಸಾದ್ ಅವರ ನಿಧನದಿಂದಾಗಿ ತೆರವಾಗಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅವರ ಕುಟುಂಬ ಸದಸ್ಯರೊಬ್ಬರನ್ನು ಕಣಕ್ಕಿಳಿಸಬೇಕು ಎಂಬುದು ನನ್ನ ವೈಯುಕ್ತಿಕ ಅಭಿಪ್ರಾಯವಾಗಿದೆ ಎಂದು ತಿಳಿಸಿದರು.

Leave a Reply

comments

Related Articles

error: