ಕರ್ನಾಟಕಪ್ರಮುಖ ಸುದ್ದಿ

ಡಿ.7-9 : ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಮಂಡ್ಯ (ನ.29): 2018-19ನೇ ಸಾಲಿನ ರಾಜ್ಯ ಮಟ್ಟದ ಯುಜನೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 7, 8 ಮತ್ತು 9 ರಂದು ತುಮಕೂರಿನ ಗಾಜಿನಮನೆಯಲ್ಲಿ ಸಂಘಟಿಸಲಾಗುತ್ತಿದ್ದು, ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮಸ್ಥಾನ ಪಡೆದವರು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ಎಲ್ಲಾ ಕಲಾಬಂಧುಗಳು ಡಿ.7 ರಂದು ತುಮಕೂರಿನಲ್ಲಿ ಮುಖ್ಯ ವೇದಿಕೆಯಾದ ಗಾಜಿನಮನೆಯಲ್ಲಿ ಮಧ್ಯಾಹ್ನ 12 ಗಂಟೆಯ ಒಳಗೆ ಸಂಘಟಕರಲ್ಲಿ ನೊಂದಣಿ ಮಾಡಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಛೇರಿ ದೂರವಾಣಿ ಸಂಖ್ಯೆ:08232-224725 ಅನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: