ಕರ್ನಾಟಕಪ್ರಮುಖ ಸುದ್ದಿಮೈಸೂರು

ಉಪಚುನಾವಣೆ : ಅಭ್ಯರ್ಥಿ ಆಯ್ಕೆಗೆ ಜನಾಭಿಪ್ರಾಯ ಸಂಗ್ರಹಿಸುತ್ತಿರುವ ಸಿಎಂ

ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಯಾವುದೇ ಸಂದರ್ಭದಲ್ಲಾದರೂ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಗಾಗಿ ಜನಾಭಿಪ್ರಾಯವನ್ನು ಸಂಗ್ರಹಿಸಲು ಮುಂದಾಗಿದ್ದಾರೆ.
ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರ ಜೊತೆ ಮಾತುಕತೆ ನಡೆಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಂಜನಗೂಡಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗಬೇಕೆಂಬುದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಮೈಸೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ರಣತಂತ್ರ ರೂಪಿಸುತ್ತಿದ್ದಾರೆ. ನಂಜನಗೂಡು ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್ ಅವರನ್ನು ಬಗ್ಗು ಬಡಿಯಲು ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದು, ಅವರ ನಡೆ ಕುತೂಹಲ ಮೂಡಿಸಿದೆ.

Leave a Reply

comments

Related Articles

error: