ಸುದ್ದಿ ಸಂಕ್ಷಿಪ್ತ

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ

ಮೈಸೂರು,.29-ನಗರದಲ್ಲಿ ಇಂದಿನಿಂದ ಡಿ.8 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ನೇಮಕಾತಿ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಯು ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ  ನಡೆಯಲಿದೆ.

ಪರೀಕ್ಷಾ  ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಹಾಗೂ ಪರೀಕ್ಷೆಯು ಸುಗಮವಾಗಿ ನಡೆಯುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಬಳಿ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ  ನಿಷೇದಿತ ಪ್ರದೇಶವೆಂದು ಘೋಷಿಸಿ ಮೈಸೂರು ನಗರದ ಪೊಲೀಸ್ ಕಮೀಷನರ್ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ನಡೆಯುವ ದಿನದಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ, ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. (ಎಂ.ಎನ್)

Leave a Reply

comments

Related Articles

error: