ಸುದ್ದಿ ಸಂಕ್ಷಿಪ್ತ

ನ.30ರಂದು ಸ್ವಚ್ಫತಾ ಅಭಿಯಾನ-ವಿಶೇಷ ಜಾಗೃತಿ ಕಾರ್ಯಕ್ರಮ

ಮೈಸೂರು,.29- ಸ್ವಚ್ಫತಾ ಅಭಿಯಾನವಿಶೇಷ ಜಾಗೃತಿ ಕಾರ್ಯಕ್ರಮವನ್ನು ನ.30 ರಂದು ಬೆಳಿಗ್ಗೆ 10.30ಕ್ಕೆ ಶಾರದಾದೇವಿ ನಗರ ವಾರ್ಡ್ನಲ್ಲಿರುವ ಇಂದಿರಾ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಮೈಸೂರು ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮೈಸೂರು ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ದಿ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಾರ ಎಜುಕೇಷನಲ್ ಟ್ರಸ್ಟ್, ಇಂದಿರಾ ವಿದ್ಯಾ ಸಂಸ್ಢೆ, ಜನ ಶಿಕ್ಷಣ ಸಂಸ್ಥೆ, ವಿವೇಕಾನಂದ ಯೂತ್ ಮೂಮೆಂಟ್ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಪ್ರತಾಪ ಸಿಂಹ ಕಾರ್ಯಕ್ರಮ ಉದ್ಘಾಟಿಸುವರುಮಹಾಪೌರರಾದ ಪುಷ್ಪಲತಾ ಜಗನ್ನಾಥ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡುವರು. (ಎಂ.ಎನ್)

Leave a Reply

comments

Related Articles

error: