ಕರ್ನಾಟಕ

ಪ್ರವಾಸಿ ಟ್ಯಾಕ್ಸಿ : ಆಕ್ಷೇಪಣೆಗಳಿಗೆ ಆಹ್ವಾನ

ಮಂಡ್ಯ (ಡಿ.3): 2017-18ನೇ ಸಾಲಿನ ಮಂಡ್ಯ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಹಿಂದುಳಿದ ಮತ್ತು ಅಲ್ಪ ಸಂಖ್ಯಾತ ವರ್ಗದ ಅರ್ಹ ನಿರುದ್ಯೋಗಿ ವಿದ್ಯಾವಂತ ಅಭ್ಯರ್ಥಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಪ್ರವಾಸಿ ಟ್ಯಾಕ್ಸಿ ಖರೀದಿಸಲು ರೂ.3.00 ಲಕ್ಷಗಳ ಸಹಾಯಧನ ನೀಡಲಾಗುವುದು.

2017-18ನೇ ಸಾಲಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮಂಡ್ಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಛೇರಿಯ ಸೂಚನಾ ಫಲಕದಲ್ಲಿ ಡಿಸೆಂಬರ್ 3 ರಂದು ಪ್ರಕಟಿಸಲಾಗುವುದು.

ತಾತ್ಕಾಲಿಕವಾಗಿ ಆಯ್ಕೆಯಾಗಿರುವ 30 ಅಭ್ಯರ್ಥಿಗಳ ಬಗ್ಗೆ ಯಾವುದೇ ಸಾರ್ವಜನಿಕ ಆಕ್ಷೇಪಣೆಗಳಿದ್ದಲ್ಲಿ, ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಉಪನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಮಂಡ್ಯ ಇವರಿಗೆ ಡಿಸೆಂಬರ್ 10 ರೊಳಗೆ ಸಲ್ಲಿಸಬಹುದು ಎಂದು ಮಂಡ್ಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. (ಎನ್.ಬಿ)

Leave a Reply

comments

Related Articles

error: