
ಕರ್ನಾಟಕಪ್ರಮುಖ ಸುದ್ದಿ
ತಂದೆ-ತಾಯಾಣೆ ಬಿಜೆಪಿಗೆ ಹೋಗಲ್ಲ: ಶಾಸಕ ಗೌರಿ ಶಂಕರ್
ತುಮಕೂರು (ಡಿ.3): ನನ್ನ ತಂದೆ-ತಾಯಿ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಬಿಜೆಪಿಗೆ ಹೋಗುವುದಿಲ್ಲ. ಮಾಧ್ಯಮಗಳು ಅನಗತ್ಯವಾಗಿ ಇಂತಹ ಸುದ್ದಿಗಳನ್ನು ಬಿತ್ತರಿಸಬೇಡಿ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಹೇಳಿದ್ದಾರೆ.
ಜಿಲ್ಲೆಯ ಬೆಳ್ಳಾವಿಯಲ್ಲಿ ಏರ್ಪಡಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವು ಮಾಧ್ಯಮಗಳ ಮೂಲಕ ನನ್ನ ತೇಜೋವಧೆ ಮಾಡಲಾಗುತ್ತಿದೆ. ನನ್ನ ತಂದೆ ಅವರಿಗೆ ಹುಷಾರಿಲ್ಲದೆ ಹೊರದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎರಡೂವರೆ ತಿಂಗಳಿನಿಂದ ಅವರು ಅರೆಪ್ರಜ್ಞಾವಸ್ಥೆಯಲ್ಲಿದ್ದಾರೆ. ನಮ್ಮ ಕಷ್ಟ ನಮಗಿದೆ. ಇಂಥ ಸಂದರ್ಭದಲ್ಲಿ ಅನಗತ್ಯ ಸುದ್ದಿಗಳನ್ನು ಮಾಧ್ಯಮಗಳು ಬಿತ್ತರಿಸಿ ನಮ್ಮ ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾವು ದುಃಖದಲ್ಲಿದ್ದೇವೆ. ಈ ಪರಿಸ್ಥಿತಿಯಲ್ಲಿ ಆ ಪಕ್ಷ ಸೇರುತ್ತಾರೆ. ಈ ಪಕ್ಷ ಸೇರುತ್ತಾರೆ ಎಂದು ಹೇಳುವುದು ಎಷ್ಟು ಸಮಂಜಸ. ನಾನು ಇದ್ದರೂ ಜೆಡಿಎಸ್ನಲ್ಲೇ ಇರುತ್ತೇನೆ. ಸತ್ತರೂ ಜೆಡಿಎಸ್ನಲ್ಲೇ ಸಾಯುತ್ತೇನೆ. ಯಾವ ಪಕ್ಷಕ್ಕೂ ಹೋಗಲು. ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗಲ್ಲ. ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಬೇಡಿ. ಇಂಥ ಸುದ್ದಿ ಹರಿದಾಡುವುದಕ್ಕೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. (ಎನ್.ಬಿ)