ಮೈಸೂರು

ಕೃತಜ್ಞತೆ ಸಲ್ಲಿಸಿದ ಗೀತಾ ಮಹದೇವಪ್ರಸಾದ್

ಸಚಿವ ಹೆಚ್.ಎಸ್.ಮಹದೇವಪ್ರಸಾದ್ ಅವರು ಅಕಾಲಿಕ ನಿಧನರಾದ ಸಂದರ್ಭ ನಮ್ಮ ಕುಟುಂಬಕ್ಕೆ ಆದ ಆಘಾತ, ಸಂಕಟ, ನೋವಿನ ಸಂದರ್ಭದಲ್ಲಿ ನಮ್ಮ ಜೊತೆ ದುಃಖದಲ್ಲಿ ಭಾಗಿಯಾಗಿ, ಅವರ ಅಂತ್ಯ ಸಂಸ್ಕಾರದವರೆಗೂ ನಮಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ ಎಲ್ಲರಿಗೂ ಮಹದೇವಪ್ರಸಾದ್ ಅವರ ಪತ್ನಿ ಡಾ.ಗೀತಾ ಕೃತಜ್ಞತೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಹೋದ್ಯೋಗಿಯ ಅಗಲಿಕೆಯ ನೋವಿನ ನಡುವೆಯೂ ಇಡೀ ವ್ಯವಸ್ಥೆಯ ಉಸ್ತುವಾರಿ ವಹಿಸಿ ಪಾರ್ಥಿವ ಶರೀರವನ್ನು ತರುವುದರಿಂದ ಹಿಡಿದು ಅಂತ್ಯಕ್ರಿಯೆ ನಡೆಯುವವರೆಗೂ ಜೊತೆಯಲ್ಲಿದ್ದು, ದು:ಖದಲ್ಲಿ ಭಾಗಿಯಾಗಿ ಇಡೀ ಸರ್ಕಾರ ಸ್ಪಂದಿಸುವಂತೆ ಮಾಡಿದ್ದಾರೆ.

ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ದೂರವಾಣಿ ಮೂಲಕ ಸಂತಾಪ ಸೂಚಿಸಿ ಧೈರ್ಯ ತುಂಬಿದ್ದರು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧಿಪತಿಗಳು, ಧಾರ್ಮಿಕ ಮುಖಂಡರು, ಸಚಿವ ಸಂಪುಟದ ಎಲ್ಲಾ ಹಿರಿಯ ಸಚಿವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷಾತೀತವಾಗಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮಮಂಡಳಿಗಳ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಮುಖಂಡರುಗಳು, ಮಾಜಿ ಸಚಿವರು, ಪಕ್ಷದ ಕಾರ್ಯಕರ್ತರುಗಳು, ಅಭಿಮಾನಿಗಳು, ಸ್ನೇಹಿತರು, ಕುಟುಂಬವರ್ಗದವರು, ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಸಾಮಾಜಿಕ ಜಾಲತಾಣ, ಮಾಧ್ಯಮ ಪ್ರತಿನಿಧಿಗಳು ಜತೆಯಲ್ಲಿದ್ದು, ಧೈರ್ಯ ತುಂಬಿದ್ದು, ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

comments

Related Articles

error: