ಸುದ್ದಿ ಸಂಕ್ಷಿಪ್ತ

ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಿನಂದನೆ ನಾಳೆ

ಮೈಸೂರು,ಡಿ.5 : ಮೈಸೂರು ವಿಶ್ವವಿದ್ಯಾಲಯದ ಕಾನೂನು ಅಧ್ಯಯನ ವಿಭಾಗ, ಕಾನೂನು ಶಾಲೆ  ಜಂಟಿಯಾಗಿ ನೂತನವಾಗಿ ನೇಮಕವಾದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರ ಅಭಿನಂದನಾ ಸಮಾರಂಭವನ್ನು ಡಿ.6ರ ಬೆಳಗ್ಗೆ 11.30ಕ್ಕೆ ಮಾನಸಗಂಗೋತ್ರಿಯ ಕಾನೂನು ಅಧ್ಯಯನ ವಿಭಾಗದ ಸೆಮಿನಾರ್ ಹಾಲ್ ನಲ್ಲಿ ಏರ್ಪಡಿಸಲಾಗಿದೆ.

ಮುಖ್ಯ ಅತಿಥಿಯಾಗಿ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಡಾ.ಪಿ.ವೆಂಕಟರಾಮಯ್ಯ ಇರಲಿದ್ದಾರೆ. ವಿಭಾಗದ ಮುಖ್ಯಸ್ಥರಾದ ಪ್ರೊ.ಡಾ.ಸಿ.ಬಸವರಾಜು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: