ಸುದ್ದಿ ಸಂಕ್ಷಿಪ್ತ

ಡಿ.7,8ರಂದು ಜೆಎಸ್ಎಸ್ ಪಬ್ಲಿಕ್ ಶಾಲೆಯಿಂದ ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆ

ಮೈಸೂರು,ಡಿ.5 : ಜೆಎಸ್ಎಸ್ ಪಬ್ಲಿಕ್ ಸ್ಕೂಲ್ ವತಿಯಿಂದ ಅಂತರ ಶಾಲಾ ರಸಪ್ರಶ್ನೆ ಸ್ಪರ್ಧೆಯನ್ನು ಡಿ.7,8ರಂದುಜೆಎಸ್ಎಸ್ ಆಸ್ಪತ್ರೆಯ ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಏರ್ಪಡಿಸಲಾಗಿದೆ.

ಡಿ.7ರಂದು ಬೆಳಗ್ಗೆ 10.30ಕ್ಕೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ  ಡಾ.ಕೆ.ಜಾವೇದ್ ನಯೀಮ್ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

ಡಿ.8ರ ಬೆಳಗಿನ 10.30ಕ್ಕೆ ಸಮಾರೋಪ ಸಮಾರಂಭ, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥಾಪಕ ಡಾ.ಆರ್.ಬಾಲಸುಬ್ರಹ್ಮಣ್ಯಂ ಸಾನಿಧ್ಯ ವಹಿಸಲಿದ್ದಾರೆ. ಜೆಎಸ್ಎಸ್ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಹಾಗು ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: