ಮೈಸೂರು

ಗೃಹ ಇಲಾಖೆ ಸಂಪೂರ್ಣ ವಿಫಲ : ಬಿಜೆಪಿ ಆರೋಪ

ಬೆಂಗಳೂರಿನ ಯುವತಿಯ ಮೇಲಿನ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಮೈಸೂರಿನಲ್ಲಿ  ಪ್ರತಿಭಟನೆ ನಡೆಯಿತು.

ಮೈಸೂರಿನ ಗಾಂಧಿವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಗೃಹ ಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಈ ಸಂದರ್ಭ ಮಾತನಾಡಿದ ಪಾಲಿಕೆ ಸದಸ್ಯ ನಂದೀಶ್ ಪ್ರೀತಮ್, ರಾಜ್ಯದಲ್ಲಿ ಮಹಿಳೆಯರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಆ ದಿಟ್ಟ ಮಹಿಳೆ ಮಾತ್ರ ಈ ವಿಡಿಯೋ ನೀಡಿದ್ದಾರೆ. ಇನ್ನೂ ಅನೇಕ ಪ್ರಕರಣಗಳು ಮುಚ್ಚಿ ಹೋಗಿವೆ. ಗೃಹ ಮಂತ್ರಿಗಳು ಪ್ರಕರಣದ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದೇವೆ. ಮುಂದೆ ಮೈಸೂರು ನಗರ ಹಾಗೂ ಬಿಜೆಪಿ ಘಟಕದಿಂದ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.  ಇದೇವೇಳೆ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದಲೂ ಪ್ರತಿಭಟನೆಗೆ ನಡೆಯಿತು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗೋಕುಲ್ ಗೋವರ್ಧನ ನೇತೃತ್ವದಲ್ಲಿ  ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

comments

Related Articles

error: