ಪ್ರಮುಖ ಸುದ್ದಿ

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸುಧಾರಿಸಿದ್ದು ಅವರು ಚೆನ್ನಾಗಿದ್ದಾರೆ : ಡಾ.ಜಿ.ಪರಮೇಶ್ವರ್

ರಾಜ್ಯ(ತುಮಕೂರು),ಡಿ.6:- ಸಿದ್ಧಗಂಗಾ ಶ್ರೀಗಳ ಆರೋಗ್ಯ ಸುಧಾರಿಸಿದ್ದು ಅವರು ಚೆನ್ನಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು

ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ್ ಶ್ರೀಗಳ ಆರೋಗ್ಯ ವಿಚಾರಿಸಿದರು. ಬಳಿಕ  ಶ್ರೀಗಳ ಆರೋಗ್ಯದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಾ.ಪರಮೇಶ್ವರ್, ನಿನ್ನೆ ಸಂಜೆ ಶ್ರೀಗಳ ಹೃದಯ ಬಡಿತದಲ್ಲಿ ಏರುಪೇರಾಗಿತ್ತು. ಸ್ವಲ್ಪ ಜ್ವರವೂ ಕಂಡು ಬಂದಿತ್ತು. ಹಾಗಾಗಿ ಡಾ. ರವೀಂದ್ರ ಅವರ ವೈದ್ಯರ ತಂಡ ಚಿಕಿತ್ಸೆ ನೀಡಿದೆ. ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ. ಸ್ವಾಮೀಜಿಯವರು ರಾತ್ರಿ ಪೂಜೆ ನೆರವೇರಿಸಿದ್ದಾರೆ ಎಂದು ತಿಳಿಸಿದರು.

ಶ್ರೀಗಳು ಎಂದಿನಂತೆ ಚೆನ್ನಾಗಿ ಮಾತನಾಡಿಸಿದರು.  ಅವರು ಆರಾಮವಾಗಿದ್ದು ಏನು ತೊಂದರೆ ಇಲ್ಲ. ಶ್ರೀಗಳಿಗೆ ಹೆಚ್ಚಿನ ಚಿಕಿತ್ಸೆ ನೀಡುವ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ಪರಮೇಶ್ವರ್ ಸ್ಪಷ್ಟನೆ ನೀಡಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: