ಮೈಸೂರು

ನ್ಯಾಯವಾದಿಗಳಿಂದ ನ್ಯಾಯಾಲಯ ಕಲಾಪ ಬಹಿಷ್ಕಾರ

ಮೈಸೂರಿನ ನ್ಯಾಯಾಲಯದ ಆವರಣದಲ್ಲಿ ಪೊಲೀಸರಿಂದ ನ್ಯಾಯವಾದಿಗಳ ಮೇಲೆ ದೌರ್ಜನ್ಯವಾಗುತ್ತಿದೆ. ಸೂಕ್ತ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ  ನ್ಯಾಯಾಲಯ ಕಲಾಪ ಬಹಿಷ್ಕರಿಸಿ ವಕೀಲರ ಸಂಘದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ಜನವರಿ ಮೂರನೇ ತಾರೀಖಿನಂದು ವಕೀಲರಾದ ಶಿವಕುಮಾರ್ ಎಂಬವರು ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸಮೇತ ತೆರಳಿದಾಗ ಕೆ.ಆರ್.ಠಾಣೆಯ ಎಎಸ್ಐ ಮಹದೇವಯ್ಯ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ವಕೀಲರ ಸಂಘಕ್ಕೆ  ದೂರು ನೀಡಿದ್ದರು.

ಎಎಸ್ಐ  ಮಹದೇವ್ ಅವರ ಕೃತ್ಯವನ್ನು ಖಂಡಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ನ್ಯಾಯವಾದಿಗಳು ಒತ್ತಾಯಿಸಿದರು. ಪೊಲೀಸರ ದೌರ್ಜನ್ಯ ಕ್ರಮವನ್ನು ಖಂಡಿಸುತ್ತೇವೆ ಎಂದರು.

ಈ ಸಂದರ್ಭ ವಕೀಲರ ಸಂಘದ ಅಧ್ಯಕ್ಷ ರಾಮಮೂರ್ತಿ, ಕಾರ್ಯದರ್ಶಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: