ಕರ್ನಾಟಕಪ್ರಮುಖ ಸುದ್ದಿ

ಆರ್.ಟಿ.ಇ: ಇನ್ಮುಂದೆ ಖಾಸಗಿ ಶಾಲೆಗಳಿಗೆ ಶುಲ್ಕ ವಿನಾಯಿತಿ ಇಲ್ಲ!?

ಬೆಂಗಳೂರು (ಡಿ.6): ಆರ್.ಟಿ.ಇ ಅಡಿ ಶುಲ್ಕ ವಿನಾಯತಿ ಮೂಲಕ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಮಕ್ಕಳ ಪೋಷಕರಿಗೆ ಶಾಕಿಂಗ್ ನ್ಯೂಸ್ ಇದೆ. ಅದೇನಪ್ಪಾ ಅಂದ್ರೆ ಇನ್ನುಮುಂದೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಮಕ್ಕಳಿಗೆ ಆರ್.ಟಿ.ಇ ಅಡಿ ಶುಲ್ಕ ವಿನಾಯತಿ ಸಿಗುವುದಿಲ್ಲ. ಈ ಕುರಿತು ಕಾಯಿದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

ಪೋಷಕರು ತಾವು ವಾಸಿಸುತ್ತಿರುವ ಸ್ಥಳದಲ್ಲಿ ಸರ್ಕಾರಿ ಶಾಲೆ ಇದ್ದರೂ ಅದನ್ನು ಬಿಟ್ಟು ಖಾಸಗಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರಿಸುತ್ತಿದ್ದರು. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಉಂಟಾದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದ್ದರಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿದ್ದು, ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಆರ್ಟಿಇ ಶುಲ್ಕ ವಿನಾಯಿತಿ ಸಿಗದಿರುವಂತೆ ರಾಜ್ಯ ಸರ್ಕಾರ ನಿಯಮಗಳಿಗೆ ತಿದ್ದುಪಡಿ ತರಲು ಮುಂದಾಗಿದೆ. (ಎನ್.ಬಿ)

Leave a Reply

comments

Related Articles

error: