ಮೈಸೂರು

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿಗೆ 10ವರ್ಷ ಕಠಿಣ ಶಿಕ್ಷೆ

ಮೈಸೂರು,ಡಿ.7:- ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೋರ್ವನಿಗೆ ಪೋಕ್ಸೋ ವಿಶೇಷ ನ್ಯಾಯಾಲಯವು 10ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 26ಸಾವಿರ ರೂ.ದಂಡವನ್ನು ವಿಧಿಸಿದೆ.

ಕೊಮ್ಮೇಗೌಡನ ಕೊಪ್ಪಲು ಗ್ರಾಮದ ನಿವಾಸಿ ಸೋಮೇಶ(35)ಎಂಬಾತನೇ ಶಿಕ್ಷೆಗೊಳಗಾದ ವ್ಯಕ್ತಿ. ಬಾಲಕಿ ಗ್ರಾಮವೊಂದರಲ್ಲಿ ತನ್ನ ಸೋದರತ್ತೆಯ ಮನೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದಳು. 2017ರ ನವೆಂಬರ್ 19ರಂದು ಸ್ತ್ರೀ ಶಕ್ತಿ ಸಂಘದ ಸಭೆಗಾಗಿ ಸೋದರ್ತ್ತೆ ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಸೋಮೇಶ್ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಮನೆಗೆ ಬಂದ ಸೋದರತ್ತೆ ಆರೋಪಿಯನ್ನು ಹಿಡಿದು ಚೆನ್ನಾಗಿ ಥಳಿಸಿ ಪೊಲೀಸರಿಗೊಪ್ಪಿಸಿದ್ದರು. ವಿಚಾರಣೆಯ ವೇಳೆ ವೈದ್ಯಕೀಯ ವರದಿ ಹಾಗೂ ಸಾಂದರ್ಭಿಕ ಸಾಕ್ಷಿಗಳು ಆರೋಪಿ ಅತ್ಯಾಚಾರವೆಸಗಿರುವುದನ್ನು ಸಾಬೀತುಪಡಿಸಿದ್ದು ನ್ಯಾಯಾಧೀಶರಾದ ಎಸ್.ಜಯಶ್ರೀ ಆರೋಪಿಗೆ ಹತ್ತು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 26ಸಾವಿರ ರೂ.ದಮಡ ವಿಧಿಸಿ ತೀರ್ಪು ನೀಡಿದ್ದಾರೆ.

ವಿಶೇಷ ಸರ್ಕಾರಿ ಅಭಿಯೋಜಕ ಬಿ.ಸಿ.ಶಿವರುದ್ರಸ್ವಾಮಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: