ಕರ್ನಾಟಕ

ಶ್ರೀಗಳ ಆರೋಗ್ಯದ ಕುರಿತು ಆತಂಕ ಬೇಡ: ಸಿಎಂ ಎಚ್ಡಿಕೆ

ಚಿಕ್ಕಮಗಳೂರು,ಡಿ.7-ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದ ಕುರಿತು ಜನರು ಆತಂಕ ಪಡುವುದು ಬೇಡ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾಗಿದೆ. ಅವರ ಆರೋಗ್ಯದ ಸಂಬಂಧ ಕ್ಷಣಕ್ಷಣದ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ. ಮಠದ ಕಿರಿಯ ಸ್ವಾಮೀಜಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ ಎಂದರು.

ಹಲವು ವೈದ್ಯರಿಂದ ಸಾಮೀಜಿಯವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸರಿಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. (ಎಂ.ಎನ್)

Leave a Reply

comments

Related Articles

error: