
ಪ್ರಮುಖ ಸುದ್ದಿಮೈಸೂರು
ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ
ಮೈಸೂರು,ಡಿ.8:- ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ಕರೆದೊಯ್ಯಲಾಗಿದೆ. ಮೈಸೂರಿನ ಸುತ್ತೂರು ಮಠದ ಶ್ರೀಗಳು ಚೆನ್ನೇಗೆ ತೆರಳಿದ್ದಾರೆ.
ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಚೆನ್ನೈಗೆ ಪ್ರಯಾಣ ಬೆಳೆಸಿ ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದರು.
ಸಿದ್ದಗಂಗಾ ಶ್ರೀಗಳಿಗೆ ಇಂದು ಬೆಳಿಗ್ಗೆ ಚೆನ್ನೈನ ಡಾ.ರೇಲಾ ಇನ್ಸಟಿಟ್ಯೂಟ್ ಆಂಡ್ ಮೆಡಿಕಲ್ ಸೆಂಟರ್ ನಲ್ಲಿ ಪಿತ್ತನಾಳದ ಸಣ್ಣಪ್ರಮಾಣದ ಶಸ್ತ್ರ ಚಿಕಿತ್ಸೆಯನ್ನು ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ. (ಕೆ.ಎಸ್,ಎಸ್.ಎಚ್)