ಸುದ್ದಿ ಸಂಕ್ಷಿಪ್ತ

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ (ಡಿ.8): ಮದ್ದೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ  ಖಾಲಿ ಇರುವ 3 ಅಂಗನವಾಡಿ ಕಾರ್ಯಕರ್ತೆ ಮತ್ತು 26 ಸಹಾಯಕಿಯರ ಹುದ್ದೆ ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‍ಲೈನ್ ವಿಳಾಸ http://anganwadirecruit.kar.nic.in ನಲ್ಲಿ ನಿಗದಿತ ನಮೂನೆಯಲ್ಲಿ ಕೋರಿರುವ ಮಾಹಿತಿಯನ್ನು ಮತ್ತು ದಾಖಲಾತಿಗಳನ್ನು ಅಪ್‍ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮದ್ದೂರು ಇವರನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: