ಪ್ರಮುಖ ಸುದ್ದಿ

ಖಾಸಗಿ ಬಸ್ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು

ರಾಜ್ಯ(ಬೆಂಗಳೂರು)ಡಿ.10:- ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಗೊರಗುಂಟೆಪಾಳ್ಯದ ವೃತ್ತದ ಬಳಿ ಈ ಘಟನೆ ನಡೆದಿದೆ. ಸಿದ್ದೇಗೌಡ ಸಾವನ್ನಪ್ಪಿದ ಬೈಕ್ ಸವಾರರಾಗಿದ್ದು, ಹಿಮಾಲಯ ಕಂಪನಿಗೆ ಸೇರಿದ ಖಾಸಗಿ ಬಸ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಸಿದ್ಧೇಗೌಡ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ವಾಹನ ಡಿಕ್ಕಿಯಾಗಿದೆ. ಈ ವೇಳೆ ಸಿದ್ದೇಗೌಡ ಕೆಳಕ್ಕೆ ಉರುಳಿದ್ದು ಈ ಸಮಯದಲ್ಲಿ ಬಸ್ ಅವರ ಮೇಲೆ ಹರಿದಿದೆ ಎನ್ನಲಾಗಿದೆ.

ಈ ಕುರಿತು ಯಶವಂತಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: