ಮೈಸೂರು

ಡಿ.14ರಂದು ಶ್ರೀಚಾಮುಂಡೇಶ್ವರಿ ಹಾಗೂ ಸಮೂಹ ದೇವಸ್ಥಾನಗಳಲ್ಲಿ ಪ್ರತಿಭಟನೆ

ಮೈಸೂರು,ಡಿ.10 : ಹಲವು ಬೇಡಿಕೆಗಳ ಈಡೇರಿಕೆಗಾಗಿ ಶ್ರೀ ಚಾಮುಂಡೇಶ್ವರಿ ಹಾಗೂ ಸಮೂಹ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು  ಡಿ.14 ರಿಂದ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ವಂಶಪಾರಂಪರ್ಯವಾಗಿ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ತಮಗೆ ದೇವಸ್ಥಾನಗಳಲ್ಲಿ ಹಿಂದಿಗಿಂತಲೂ ಹೆಚ್ಚಿನ ಒತ್ತಡವಿದೆ. ಭಕ್ತರ ಸಂಖ್ಯೆಯು ಗಣನೀಯವಾಗಿ ಹೆಚ್ಚಿದ್ದು  ಒತ್ತಡದಿಂದ ಕರ್ತವ್ಯ ನಿರ್ವಹಿಸಬೇಕಿದೆ,  ಸರ್ಕಾರಕ್ಕೆ ದೇವಸ್ಥಾನಗಳಿಂದ ಉತ್ತಮ ಆದಾಯ ಬರುತ್ತಿದೆ, ಹೀಗಿದ್ದರೂ ಸಹ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಮಾತ್ರ ಯಾವುದೇ ಸೌಲಭ್ಯಗಳು ಇಲ್ಲ, ಅಲ್ಲದೇ ಜೀವನ ನಿರ್ವಹಣೆಯು ದುಸ್ತರವಾದ ಸ್ಥಿತಿ ಎದುರಾಗಿದ್ದು, ಆದ್ದರಿಂದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿರುವುದಾಗಿ ತಿಳಿಸಲಾಗಿದೆ.

ಆದ್ದರಿಂದ ಸಮೂಹ ದೇವಸ್ಥಾನಗಳ ಸಂಬಂಧಿಸಿದವರು ಈ ಧರಣಿಯಲ್ಲಿ ಪಾಲ್ಗೊಳ್ಳಲಿದ್ದು ಸಾರ್ವಜನಿಕರು ತಮ್ಮೊಂದಿಗೆ ಸಹಕರಿಸಬೇಕೆಂದು ಸಮೂಹ ದೇವಸ್ಥಾನ ಹಾಗೂ ನೌಕರರ ಸಂಘ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಜನತೆಯಲ್ಲಿ ಮನವಿ ಮಾಡಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: