ಪ್ರಮುಖ ಸುದ್ದಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟ ಹಿನ್ನೆಲೆ : ಕೋರ್ ಕಮಿಟಿ ಸಭೆ ಕರೆದ ಪ್ರಧಾನಿ ಮೋದಿ

ರಾಜ್ಯ(ನವದೆಹಲಿ)ಡಿ.11:- ಐದು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು ಈ ಚುನಾವಣೆಯಲ್ಲಿ ಬಿಜೆಪಿಯ ನಿರೀಕ್ಷೆ ಎಲ್ಲ ತಲೆಕೆಳಗಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೋರ್ ಕಮಿಟಿ ಸಭೆ ಕರೆದಿದ್ದಾರೆ.

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಮಂಗಳವಾರ ಸಂಜೆ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಪಂಚ ರಾಜ್ಯಗಳ ಫಲಿತಾಂಶದ ಬಗ್ಗೆ ಸಭೆಯಲ್ಲಿ ವಿವರವಾದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕೂಡ ಭಾಗವಹಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: