ಮೈಸೂರು

ಕಾವೇರಿ ತೀರ್ಪು ನೀಡಿದ ನ್ಯಾಯಾಧೀಶರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ

ಕಾವೇರಿ ನದಿ ನೀರಿನ ಸಮಸ್ಯೆಯ ತೀರ್ಪಿನಿಂದಾಗಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಿಚ್ಚು ಹಚ್ಚಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರೇ ನೇರ ಹೊಣೆ. ಎರಡೂ ರಾಜ್ಯದ ಜನತೆಯನ್ನು ರೊಚ್ಚಿಗೇಳಿಸಿ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯಾಗಲು ಕಾರಣರಾದ ನ್ಯಾಯಾಧೀಶರನ್ನು ವಜಾ ಮಾಡಿ ಸೂಕ್ತ ತನಿಖೆ ನಡೆಸಬೇಕೆಂದು “ಭಾರತದ ಪ್ರಜಾಪ್ರಭುತ್ವ ಉಳಿವಿಗಾಗಿ ಹಾಗೂ ಸಮಾನತೆಯ ಹೋರಾಟ ಸಮಿತಿ”ಯ ಬೆಸ್ಟ್ ಸಿಟಿಜನ್ ಆಫ್ ಇಂಡಿಯಾ ಪ್ರಶಸ್ತಿ ಪುರಸ್ಕೃತ ರಾಜು  ಆಗ್ರಹಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಾರ್ವಜನಿಕ ಹಿತಾಸಕ್ತಿಯ ಪತ್ರ ಬರೆದು ಅವರು ಒತ್ತಾಯಿಸಿದ್ದಾರೆ.

ಸಂಸದರು ಸಂಸತ್ತಿನಲ್ಲಿ ಈ ಬಗ್ಗೆ ಧ್ವನಿ ಎತ್ತದೆ ಇರುವುದು ಖಂಡನೀಯ. ನ್ಯಾಯಾಂಗದ ಮೂಲಕ ಮೂಲಭೂತ ಸೌಲಭ್ಯಗಳನ್ನು ನಾಗರಿಕರಿಗೆ ಒದಗಿಸಲು ಸಾಧ್ಯವಿಲ್ಲ, ಪ್ರಕೃತಿಯ ವೈಫಲ್ಯ ಅರಿಯದೆ ನ್ಯಾಯಾಧೀಶರು ನೀಡಿದ ತೀರ್ಪುನಿಂದ ಎರಡು ರಾಜ್ಯಕ್ಕೆ ತೀವ್ರ ಹಾನಿ ಉಂಟಾಗಿದೆ. ಕಾವೇರಿ ವಿವಾದವು ಪ್ರತಿ ವರ್ಷ ನ್ಯಾಯಾಲಯದ ಮೆಟ್ಟಿಲೇರುವುದರಿಂದ ಎರಡು ರಾಜ್ಯಗಳಿಗೂ ಛೀಮಾರಿ ಹಾಕಿ ಪ್ರಕರಣ ವಜಾ ಮಾಡಿ ಶಾಶ್ವತ ಪರಿಹಾರ ಸೂಚಿಸಬೇಕು ಎರಡು ರಾಜ್ಯಗಳ ಪರವಾಗಿ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ತೀರ್ಪ ನೀಡಿದ ನ್ಯಾಯಾಧೀಶರನ್ನು ವಜಾ ಮಾಡಿ ಎಂದು ರಾಷ್ಟ್ರಪತಿಗಳಿಗೆ ಬರೆದಿರುವ ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

comments

Related Articles

error: