ಮೈಸೂರು

ಅಲ್ಪಸಂಖ್ಯಾತ ಫಲಾನುಭವಿಗಳ ಪ್ರಗತಿ ಪರಿಶೀಲನಾ ಸಭೆ: ಮಾಹಿತಿ ನೀಡಿದ ಅಧಿಕಾರಿಗಳು

2016-17ನೇ ಸಾಲಿನ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ನೀಡಿದ ಮೂಲಭೂತ ಸೌಕರ್ಯಗಳ ಸಂಬಂಧ ಜಿಲ್ಲಾ ಮಟ್ಟದ ಮತ್ತು ಉಪವಿಭಾಗ ಮಟ್ಟದ ಅಧೀನ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಅಪರ ಜಿಲ್ಲಾಧಿಕಾರಿ ವೆಂಕಟೇಶ್  ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ , ಜಿಲ್ಲೆಯಲ್ಲಿ  ಒಟ್ಟು 2691ಅಂಗನವಾಡಿ ಹಾಗೂ  169 ಮಿನಿ ಅಂಗನವಾಡಿ ಕೇಂದ್ರಗಳು ಸೇರಿದಂತೆ ಒಟ್ಟು 2860 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅಲ್ಪಸಂಖ್ಯಾತರಿಗಾಗಿ ಒಟ್ಟು 424 ಕೇಂದ್ರಗಳನ್ನು ನಿಗದಿಪಡಿಸಬೇಕಾಗಿದೆ. ಪ್ರಸಕ್ತ 148 ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರಿಗಾಗಿ ತೆರೆಯಲಾಗಿದ್ದು, ಉಳಿದ ಅಂಗನವಾಡಿ ಕೇಂದ್ರಗಳಲ್ಲಿಯೂ  ಸಹ ಅಲ್ಪಸಂಖ್ಯಾತ ಫಲಾನುಭವಿಗಳು ಹಾಜರಾಗುತ್ತಿದ್ದಾರೆ. ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ, ಶಾಲಾಪೂರ್ವ ಶಿಕ್ಷಣ ಹಾಗೂ ಚುಚ್ಚುಮದ್ದಿನ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಲ್ಪಸಂಖ್ಯಾತರು ಇರುವ ಪ್ರದೇಶಗಳಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಒಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಶೇ.15ರಷ್ಟು ಗುರಿ ನಿಗದಿಪಡಿಸಿಕೊಂಡಿರುವುದರಿಂದ ಗುರಿ ಅಧಿಕವಾಗಿದ್ದು, ಶೇ.100ರಷ್ಟು ಗುರಿ ಸಾಧಿಸಲು ಸಾಧ್ಯವಾಗಿರುವುದಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ವಕ್ಫ್ ಬೋರ್ಡ್ ಅಧಿಕಾರಿಗಳೂ ಸೇರಿದಂತೆ 20ಕ್ಕೂ ಅಧಿಕ ಇಲಾಖಾಧಿಕಾರಿಗಳು ಪಾಲ್ಗೊಂಡು ಅವರವರ ಕ್ಷೇತ್ರ ವ್ಯಾಪ್ತಿಯ ವಿವರಣೆ ನೀಡಿದರು.

Leave a Reply

comments

Related Articles

error: